ಹಿರಿಯ ನಟ ಅನಂತ್‌ ನಾಗ್‌ ಬಿಜೆಪಿ ಸೇರ್ಪಡೆ

ಬೆಂಗಳೂರು : ಹಿರಿಯ ನಟ ಹಾಗೂ ಮಾಜಿ ಸಚಿವ ಅನಂತ್‌ ನಾಗ್‌ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಗೊಳ್ಳಲು ವೇದಿಕೆ ಸಿದ್ಧವಾಗಿದೆ.

ಇಂದು ಸಂಜೆ 4.30ಕ್ಕೆ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಅನಂತ್‌ ನಾಗ್‌ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಇವರೊಂದಿಗೆ ನೆಲಮಂಗಲದ ಕೆಲವು ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಪಕ್ಷ ಸೇರ್ಪಡೆ ಕುರಿತಂತೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದ್ದ ವೇಳೆ ಮಾತುಕತೆಯಾಗಿದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here