ಲಂಚ ಸ್ವೀಕರಿಸುವ ವೇಳೆ ಶಾಸಕನ ಪುತ್ರನ ಕಛೇರಿಗೆ ಲೋಕಾಯುಕ್ತ ದಾಳಿ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಟೆಂಡರ್ ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಶಾಂತ್ ಮಾಡಾಳ್ ಮನೆಯಲ್ಲಿ ₹6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ ತಡರಾತ್ರಿ ವಶಪಡಿಸಿಕೊಂಡಿದ್ದಾರೆ.

ಕೆಎಸ್ ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಟೆಂಡರ್‌ ಗೆ ಸಂಬಂಧಿಸಿದಂತೆ  ₹40 ಲಕ್ಷ ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ₹1.62 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿ ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ ₹6 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಚನ್ನಗಿರಿಯಲ್ಲಿದ್ದ ಮಾಡಾಳ್ ವಿರೂಪಾಕ್ಷಪ್ಪ ಕೂಡ ಬೆಂಗಳೂರಿಗೆ ಬಂದಿದ್ದು ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅವರನ್ನೂ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ:

 

LEAVE A REPLY

Please enter your comment!
Please enter your name here