ನ್ಯೂಯಾರ್ಕ್: ದೆಹಲಿ ನಡುವೆ ಸಂಚರಿಸುತ್ತಿದ್ದ ಅಮೇರಿಕನ್ ಏರ್ ಲೈನ್ಸ್ ವಿಮಾನದಲ್ಲಿ ವಿದ್ಯಾರ್ಥಿ ಯುವಕನೊಬ್ಬ ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಕಳೆದ ಶುಕ್ರವಾರ ನಡೆದಿದ್ದು ಈಗ ಬಹಿರಂಗಗೊಂಡಿದೆ.
ಮದ್ಯ ಸೇವಿಸಿ ಅಮಲಿನಲ್ಲಿದ್ದ ಯುವಕ ನಿದ್ರಾವಸ್ಥೆಯಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು ಸಹ ಪ್ರಯಾಣಿಕನಲ್ಲಿ ಕ್ಷಮೆಯನ್ನು ಕೇಳಿದ್ದಾನೆ. ಹೀಗಾಗಿ ದೂರು ನೀಡಿಲ್ಲ ಎಂದು ವಿಮಾನ ನಿಲ್ದಾಣ ಮೂಲಗಳು ಹೇಳಿದೆ. ಆದರೆ ವಿಮಾನಯಾನ ಸಂಸ್ಥೆ, ಇದನ್ನು ಗಂಭೀರವಾಗಿ ಪರಿಗಣಿಸಿ ಐಜಿಐ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ ಗೆ ವರದಿ ಮಾಡಿದೆ. ಹೀಗಾಗಿ ದೆಹಲಿಯಲ್ಲಿ ವಿಮಾನ ಲ್ಯಾಂಡ್ ಆಗುತ್ತಲೇ ಯುವಕನನ್ನು ಬಂಧಿಸಿ ದೆಹಲಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಅಮೇರಿಕನ್ ಏರ್ ಲೈನ್ಸ್ ಹೇಳಿದೆ.