ಬೆಂಗಳೂರು: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.
ದಾವಣಗೆರೆ ನಗರದ ಪ್ರಮುಖ ಬೀದಿಗಳಲ್ಲಿ ಮಿಸ್ಸಿಂಗ್ ಪೋಸ್ಟರ್ ಹಚ್ಚಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ. ಲೋಕಾಯುಕ್ತ ಪ್ರಕರಣದಲ್ಲಿ ತಲೆಮೆರೆಸಿಕೊಂಡಿರುವ ಎ1 ಆರೋಪಿಯನ್ನು ದಯಮಾಡಿ ಹುಡುಕಿ ಕೊಡಿ. ಕಂಡಲ್ಲಿ 100 ನಂಬರ್‌ಗೆ ಕರೆ ಮಾಡಿ ಎಂದು ಪೋಸ್ಟರ್ ಗಳಲ್ಲಿ ಬರೆಯಲಾಗಿದೆ.
update: ವಿರೂಪಾಕ್ಷಪ್ಪ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸಲಾಗಿದೆ. ಇದುವರೆಗೆ ತನಿಖಾಧಿಕಾರಿಯಾಗಿದ್ದ ಸರ್ಕಲ್ ಇನ್ಸ್ ಪೆಕ್ಟರ್ ಕುಮಾರಸ್ವಾಮಿ ಅವರನ್ನು ಬದಲಾಯಿಸಿ ಅವರ ಸ್ಥಾನಕ್ಕೆ ಡಿ ವೈ ಎಸ್ ಪಿ ಆಂಥೋನಿ ಅವರನ್ನು ನೇಮಕ ಮಾಡಲಾಗಿದೆ. ಲೋಕಾಯುಕ್ತ ಕಾನೂನಿನ್ವಯ ಈ ಬದಲಾವಣೆ ಮಾಡಲಾಗಿದೆ.