



ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ರಾಜ್ಯ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.







ಹೈಕೋರ್ಟ್ ನಲ್ಲಿ ಶಾಸಕರು, ಸಂಸದರ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಮೂರ್ತಿ ಕೆ ನಟರಾಜನ್ ಅವರ ನ್ಯಾಯಪೀಠ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ. 5 ಲಕ್ಷ ರೂ. ವೈಯುಕ್ತಿಕ ಬಾಂಡ್ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ, ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ಮಾ.17ಕ್ಕೆ ವಿಚಾರಣೆಯನ್ನು ಮುಂದೂಡಿದೆ.














