ಬೈಕ್ ಅಪಘಾತ- ಹಿಂಬದಿ ಸವಾರ 21ರ ಯುವಕನ ಸಾವು

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಟಿಕೆ ಟೊಲ್ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು ಕೊಡಗಿನ ಸೋಮವಾರಪೇಟೆ ಬಿಟಿ ಕಟ್ಟೆ ನಿವಾಸಿ ಶಶಾಂಕ್(21) ಎಂದು ಗುರುತಿಸಲಾಗಿದೆ. ಸುರತ್ಕಲ್ ಟೋಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿದ್ದು, ಬೈಕ್ ನ ಹಿಂಬದಿ ಸವಾರನಾಗಿದ್ದ ಶಶಾಂಕ್‌ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here