ಮಾ.9ರ ಸಾಂಕೇತಿಕ ‘ಕರ್ನಾಟಕ ಬಂದ್’ ಕರೆ ಹಿಂಪಡೆದ ಕಾಂಗ್ರೆಸ್

ಬೆಂಗಳೂರು: ಆಡಳಿತಾರೂಢ ಬಿಜೆಪಿ ಸರಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ನೀಡಿದ್ದ  ಮಾ.9ರ ಸಾಂಕೇತಿಕ ‘ಕರ್ನಾಟಕ ಬಂದ್’ ಕರೆಯನ್ನು ಹಿಂಪಡೆದಿದೆ.

ಪರೀಕ್ಷೆಗಳು ಇರುವ ಕಾರಣ ಬಂದ್ ನಿಂದ ನಮಗೆ ತೊಂದರೆಯಾಗಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರ ಹಿತ ನಮ್ಮ ಆದ್ಯತೆ. ಹೀಗಾಗಿ ಅವರ ಅಭಿಪ್ರಾಯಕ್ಕೆ ಗೌರವ ನೀಡಿ ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಬಂದ್ ಕರೆ ವಾಪಸ್ ಪಡೆಯಲು ತೀರ್ಮಾನಿಸಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here