ಇಂದಿನಿಂದ 2022-23ರ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

ಬೆಂಗಳೂರು:2022-23ರ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ.9ರ ಇಂದಿನಿಂದ ಆರಂಭವಾಗುತ್ತಿದ್ದು, ಈ ಬಾರಿ 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮತ್ತೊಂದೆಡೆ ಪರೀಕ್ಷಾ ಪ್ರಕ್ರಿಯೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡದ ಉಪ್ಪಿನಂಗಡಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡೇ ತರಗತಿಗೆ ಬರುತ್ತಿದ್ದ 6 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು. ಈ ಪೈಕಿ ಮೂವರು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಉಳಿದ ಮೂರು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿ ಎಂದು ಸಲಹೆ ನೀಡುತ್ತೇನೆ ಎಂದು ಹೇಳಿದ್ದಾರೆ. ಹಿಜಾಬ್‌ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಪುನರುಚ್ಚರಿಸಿದ್ದು ಸಮವಸ್ತ್ರ ನಿಯಮ ಪಾಲನೆ ಖಡ್ಡಾಯ ಎಂದು ಹೇಳಿದ್ದಾರೆ. 

ದ.ಕ.ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ 52 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆ ಬರೆಯಲು ಜಿಲ್ಲೆಯ 34,340 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಪರೀಕ್ಷೆಯು ಬೆಳಗ್ಗೆ 10:15ಕ್ಕೆ ಆರಂಭಗೊಂಡು 1:15ಕ್ಕೆ ಮುಕ್ತಾಯಗೊಳ್ಳಲಿದೆ.

ರೆಗ್ಯುಲರ್ 15,171 ಬಾಲಕರು ಮತ್ತು 16,051 ಬಾಲಕಿಯರ ಸಹಿತ ಒಟ್ಟು 31,222  ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಖಾಸಗಿಯಾಗಿ 1,342 ಬಾಲಕರು, 674 ಬಾಲಕಿಯರ ಸಹಿತ 2,016 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅದಲ್ಲದೆ ಪುನರಾವರ್ತಿತ  733 ಬಾಲಕರು ಮತ್ತು 369 ಬಾಲಕಿಯರ ಸಹಿತ 1,102 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ.

ಮಂಗಳೂರು ತಾಲೂಕಿನಲ್ಲಿ 18, ಬಂಟ್ವಾಳದಲ್ಲಿ 6, ಪುತ್ತೂರಿನಲ್ಲಿ 5, ಬೆಳ್ತಂಗಡಿಯಲ್ಲಿ 6, ಸುಳ್ಯದಲ್ಲಿ 2, ಮೂಡುಬಿದಿರೆಯಲ್ಲಿ 4, ಕಡಬದಲ್ಲಿ 5, ಮುಲ್ಕಿಯಲ್ಲಿ 2, ಉಳ್ಳಾಲ ತಾಲೂಕಿನಲ್ಲಿ 4 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಸರಕಾರಿ 15, ಅನುದಾನಿತ 21, ಅನುದಾನ ರಹಿತ 16 ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 

ಪರೀಕ್ಷಾ ದಿನಗಳಂದು ಯಾವುದೇ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗದಂತೆ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಿಕೊಡಲು ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿದಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವಂತೆ ಜಿಲ್ಲೆಯ ಎಲ್ಲಾ ಮಾಲಕರಿಗೆ, ಚಾಲಕರಿಗೆ, ನಿರ್ವಾಹಕರಿಗೆ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಉಪಸಾರಿಗೆ ಆಯುಕ್ತರು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here