ಜಿಲ್ಲಾಧಿಕಾರಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಸಾಲಗಾರರ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳಿಗೆ ಫಿನೈಲ್ ಕುಡಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯ ಜಿಲ್ಲಾಧಿಕಾರಗಳ ಕಚೇರಿಯಲ್ಲಿ ಮಾ.8ರಂದು ನಡೆದಿದೆ. ಬೆಳಗಾವಿಯ ಅನಗೋಳದ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40), ಅವರ ಮಕ್ಕಳಾದ ಸೃಷ್ಟಿ (14), ಸಾಕ್ಷಿ (8) ಹಾಗೂ ಸಾನ್ವಿ (3) ಪಿನೈಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ನಾಲ್ವರೂ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲೇ ಸರಸ್ವತಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದನ್ನು ತಿಳಿದ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿದ್ದರಿಂದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರಸ್ವತಿ ಪತಿ ಅದೃಶ್ಯಪ್ಪ ಹಂಪಣ್ಣನವ ಸಲೂನ್ ಶಾಪ್ ನಡೆಸುತ್ತಿದ್ದು,ಹಲವರಿಂದ ಕೈ ಸಾಲ ಪಡೆದಿದ್ದರು. ಸಾಲಗಾರರ ಕಿರಿಕಿರಿಯಿಂದ ಅದೃಶ್ಯಪ್ಪ 15 ದಿನಗಳ ಹಿಂದೆ ಮನೆ ಬಿಟ್ಟು ನಾಪತ್ತೆಯಾಗಿದ್ದರು. ಒಂದೆಡೆ ಸಾಲಗಾರರ ಕಿರಿಕಿರಿ, ಇನ್ನೊಂದೆಡೆ ಪತಿ ನಾಪತ್ತೆಯಾಗಿರುವುದರಿಂದ ಬೇಸತ್ತ ಸರಸ್ವತಿ, ಜಿಲ್ಲಾಧಿಕಾರಿಗಳ ಭೇಟಿಗಾಗಿ ಆಗಮಿಸಿದ್ದು, ಮಕ್ಕಳಿಗೆ ಫಿನೈಲ್ ಕುಡಿಸಿ ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು.

LEAVE A REPLY

Please enter your comment!
Please enter your name here