ಮಂಗಳೂರು: ತಿಂಗಳ ಹಿಂದೆ ದೆಹಲಿಯಲ್ಲಿ ದಾಖಲಾದ ಹವಾಲ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಂಜೇಶ್ವರ ಕುಂಜತ್ತೂರಿನ ಮಹಮ್ಮದ್ ಆಬಿದ್ (42) ಎಂಬಾತನನ್ನು ಎನ್ಐಎ ಬಂಧಿಸಿದೆ. ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಆಬಿದ್ ಮಂಜೇಶ್ವರದಲ್ಲಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಲಾಗಿದೆ.