ಬೋನಿಗೆ ಬಿದ್ದ 7ನೇ ಚಿರತೆ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಅಂಗನವಾಡಿ ಪಕ್ಕದ ತೋಪಿನಲ್ಲಿ‌ ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ಗಂಡು ಚಿರತೆಯೊಂದು ಮಾ.10ರಂದು ಬೆಳಿಗ್ಗೆ ಸೆರೆಯಾಗಿದ್ದು ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.

ಕಳೆದ 4 ವರ್ಷದಲ್ಲಿ ಈ ತೋಪಿನಲ್ಲಿಟ್ಟ ಬೋನಿಗೆ ಬಿದ್ದ 7 ನೇ ಚಿರತೆ ಇದಾಗಿದೆ. ನಿರಂತರ ಈ ಭಾಗದಲ್ಲಿ ಚಿರತೆ ಕಾಟವಿದ್ದು  ಸಾರ್ವಜನಿಕರು ಭಯಭೀತರಾಗಿ ಅರಣ್ಯಾಧಿಕಾರಿಗಳೊಂದಿಗೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದರು. ಇದರಿಂದ ಬೋನ್ ಇಟ್ಟು ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸಲು ಮುಂದಾದ ಅರಣ್ಯ ಇಲಾಖೆ  ತಿಂಗಳ ಹಿಂದೆ ಇಲ್ಲಿ ಬೋನು ಇರಿಸಿತ್ತು. ಈ ತೋಟದಲ್ಲಿ ಈ ಹಿಂದೆ 2018 ಆಗಸ್ಟ್ ತಿಂಗಳಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಬಳಿಕ 2019 ಅ.6, ಡಿ.12, 2019, ಡಿ.24 ,2019 ರಲ್ಲಿ ಹಾಗೂ 2022 ರ ಎಪ್ರಿಲ್ ತಿಂಗಳಿನಲ್ಲಿ, 2022 ಅ.2 ರಂದು ಹಾಗೂ 2023 ಮಾ.10ರಂದು ಚಿರತೆ ಬೋನಿಗೆ ಬಿದ್ದಿದೆ.

LEAVE A REPLY

Please enter your comment!
Please enter your name here