5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದು- ಹೈಕೋರ್ಟ್ ಆದೇಶ

ಬೆಂಗಳೂರು : 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು. ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ವರ್ಷದಿಂದ ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

2022-23ನೇ ಸಾಲಿನಿಂದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದ್ದು, ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಲಾಗಿತ್ತು.

LEAVE A REPLY

Please enter your comment!
Please enter your name here