ಮುಂಬೈ: ಲಂಡನ್-ಮುಂಬೈ ಏರ್ ಇಂಡಿಯಾ ವಿಮಾನದ ಬಾತ್ ರೂಮ್‌ನಲ್ಲಿ ಧೂಮಪಾನ ಮಾಡಿದ್ದಲ್ಲದೆ ಇತರ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.
ಪ್ರಯಾಣಿಕನನ್ನು ಅಮೆರಿಕ ಪ್ರಜೆ 37 ವರ್ಷದ ರಮಾಕಾಂತ್ ಎಂದು ಗುರುತಿಸಲಾಗಿದೆ. ಮಾರ್ಚ್ 11 ರಂದು ನಡೆದಿರುವ ಘಟನೆಯಲ್ಲಿ ವ್ಯಕ್ತಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸಿದ್ದ ಎಂದು ವಿಮಾನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ ರಮಾಕಾಂತ್ ವಿರುದ್ಧ ಸಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಮದ್ಯಪಾನದ ಸ್ಥಿತಿಯಲ್ಲಿದ್ದರೇ ಅಥವಾ ಮಾನಸಿಕವಾಗಿ ಸಮಸ್ಯೆಗೀಡಾಗಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.