ಉತ್ತರಪ್ರದೇಶ : ಇಬ್ಬರು ಅಪ್ರಾಪ್ತ ಬಾಲಕರು, ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಸಂಬಾಲ್ ನ ಜುನ್ವಾಯಿಯಲ್ಲಿ ನಡೆದಿದೆ.
ಮಾ.9ರಂದು ಆರನೇ ತರಗತಿ ಓದುತ್ತಿದ್ದ 8 ವರ್ಷದ ಬಾಲಕಿ ತನ್ನ ಮನೆಯ ಬಳಿ ಆಟವಾಡುತ್ತಿರುವ ಸಮಯ ಬಳಿಗೆ ಬಂದ ಹನ್ನೇರಡು ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕರು ಆಟವಾಡುವ ನೆಪದಲ್ಲಿ ಮಾತನಾಡಲು ಪ್ರಾರಂಭಿಸಿ ಬಳಿಕ ಹುಡುಗಿಯನ್ನು ತಮ್ಮೊಂದಿಗೆ ಬರುವಂತೆ ಮನವೊಳಿಸಿದ್ದಾರೆ. ಅವಳನ್ನು ಕೃಷಿ ಭೂಮಿಗೆ ಕರೆದೊಯ್ದು ಇಬ್ಬರು ಆಕೆಯ ಮೇಲೆ ಸಾಮೂಹಿಕ ಅತ್ಯಚಾರ ಎಸಗಿ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಮನೆಗೆ ಬಂದ ಬಾಲಕಿ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡದಿದ್ದರು ಎರಡು ದಿನಗಳ ಬಳಿಕ ಆಕೆಯ ಆರೋಗ್ಯ ಹದಗೆಡಲು ಪ್ರಾರಂಭಿಸಿದಾಗ ಪೋಷಕರ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಆಕೆ ಅತ್ಯಚಾರಕ್ಕೆ ಒಳಗಾಗಿರುವ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಬಂಧಿಸಿ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.