ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಇಂದಿನಿಂದ ಕಣಮಿನಿಕೆಯಲ್ಲಿ ಟೋಲ್ ಸಂಗ್ರಹ ಆರಂಭಗೊಂಡಿದೆ. ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಟೋಲ್ ಸಂಗ್ರಹಕ್ಕೆ ವಿರೋಧ ವ್ಯಕ್ತವಾಗಿದೆ. ಈ ನಡುವೆ ತಾಂತ್ರಿಕ ದೋಷದಿಂದ ಟೋಲ್ ಪ್ಲಾಝದ ಕೆಲವು ಬೂತ್ ಗಳಲ್ಲಿ ಫಾಸ್ಟ್ ಟ್ಯಾಗ್ ಸ್ಥಗಿತಗೊಂಡು ವಾಹನ ಸವಾರರು ಪರದಾಡುವಂತಾಯಿತು. ಟೋಲ್ ಸಂಗ್ರಹಕ್ಕೆ ಪ್ರತಿಭಟನೆ ಬಿಸಿ ತಟ್ಟಿದ್ದು ಕಾಂಗ್ರೆಸ್ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದ್ದಾರೆ. ಟೋಲ್ ಪ್ಲಾಜ ಮುಂದೆ ಕಪ್ಪುಪಟ್ಟಿ ಧರಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರ, ವಾಹನ ಸವಾರರ ಮತ್ತು ನಡುವೆ ವಾಗ್ವಾದ ನಡೆದು ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದವರನ್ನು ಬಂಧಿಸಿದ್ದಾರೆ. ಸೆನ್ಸಾರ್ ವೈಫಲ್ಯದಿಂದ ಹಲವು ವಾಹನಗಳಿಗೆ ಹಾನಿಯಾಗಿದ್ದು ಸರಕಾರ ಮತ್ತು ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಕಿಡಿ ಕಾರಿದ್ದಾರೆ.