ಈ ಮೂವರು ಕಾಂಗ್ರೆಸ್ ನಿಂದ ಸ್ಪರ್ಧಿಸುವುದು ಬಹುತೇಕ ಖಚಿತ

ಮಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಡಿಕೇರಿ ಕ್ಷೇತ್ರಕ್ಕೆ, ಕೊಡಗಿನ ಅಭಿವೃದ್ಧಿ ಚಿಂತಕ ಎಂದೇ ಖ್ಯಾತಿ ಪಡೆದಿರುವ ಡಾ.ಮಂಥರ್ ಗೌಡ ಮತ್ತು ಕಾಂಗ್ರೆಸ್ ಕಾನೂನು ವಿಭಾಗದ ಮುಖ್ಯಸ್ಥ ನ್ಯಾಯವಾದಿ ಎ ಎಸ್ ಪೊಣ್ಣನ್ನ ಅವರು ವಿರಾಜಪೇಟೆ ಕ್ಷೇತ್ರಕ್ಕೆ ಅಭ್ಯರ್ಥಿಗಲಾಗುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್ನ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಕೊಡಗಿನವರೇ ಆದ ಕೆ ಪಿ ಸಿ ಸಿ ಸಂಯೋಜಕ ನಂದ ಕುಮಾರ್ ಸುಳ್ಯದಿಂದ ಸ್ಪರ್ಧೆಗಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ. ಮಾರ್ಚ್ 20 ಕ್ಕೆ ಕಾಂಗ್ರೆಸ್ 120 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here