ಮಂಗಳೂರು: ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮೂಲ್ಕಿ – ಮೂಡಬಿದ್ರೆ ಕ್ಷೇತ್ರದ ಚುನಾವಣೆ ಉಸ್ತುವಾರಿ ಮಿಥುನ್ ರೈಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಮೂಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದೆ.
ಜೈ ಶ್ರೀರಾಮ್ ಎಂಬ ವಾಟ್ಸ್ಆಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಎಂಬ ಹೆಸರಿನಲ್ಲಿ ಮಿಥುನ್ ರೈ ಗೆ ” ಗುಂಡಿನೂಟ ಮಾಡಿಸುತ್ತೇನೆ ” ಎಂಬ ಸಂದೇಶದೊಂದಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.