ಮಂಗಳೂರು: ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಂಡಿರುವ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ. ಈ ಸಂಧರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್, ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸೋಮಶೇಖರ್ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.