ಮಂಗಳೂರು : ವಿಪಕ್ಷವನ್ನು ಟೀಕಿಸುವ ಭರದಲ್ಲಿ ಶಿವದೂತ ಗುಳಿಗ ನಾಟಕದ ಗುಳಿಗನ ಬಗ್ಗೆ ಅಪಹಾಸ್ಯಗೈದು ಮಾತನಾಡಿದ್ದ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿ ಆಡಿದ ಮಾತಿಗೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.
ತುಳುನಾಡಿನ ಗುಳಿಗ ದೈವಾರಧನೆ ಬಗ್ಗೆ ನನಗೆ ಅಪಾರ ಗೌರವವಿದೆ. ನಾಟಕ ರಚನಾಕಾರರ, ಕಲಾವಿದರ ಬಗ್ಗೆಯೂ ಗೌರವವಿದ್ದು ರಾಜಕೀಯ ದುರುದ್ದೇಶದಿಂದ ನಾಟಕ ಪ್ರದರ್ಶನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹತಾಶ ಪ್ರಯತ್ನ ಮಾಡಿರುವುದನ್ನು ಪ್ರಸ್ಥಾಪಿಸಿದ್ದೇಯೇ ಹೊರತು ನಾಟಕ ಮತ್ತು ದೈವದ ಬಗ್ಗೆ ಮಾತನಾಡಿಲ್ಲ. ನಾನಾಡಿದ ಮಾತುಗಳಿಗೆ ಅಪಾರ್ಥ ಕಲ್ಪಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿರುವ ಕುಹಕಿಗಳ ಉದ್ದೇಶ ಈಡೇರುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.
ಸಚಿವರ ಟ್ವೀಟ್ ಇಲ್ಲಿದೆ
ತುಳುನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಆರಾಧಿಸುವ ಗುಳಿಗ ದೈವವನ್ನು ಆಧರಿಸಿ, ರಚಿಸಿರುವ ಪೌರಾಣಿಕ ನಾಟಕದ ಬಗ್ಗೆ ನನಗೆ ಅಪಾರ ಭಕ್ತಿ, ಮೆಚ್ಚುಗೆ ಇದೆ. ದೈವಗಳ ಬಗ್ಗೆ ಅಪಾರ ಭಕ್ತಿ, ಗೌರವ ಹೊಂದಿದ್ದೇನೆ.@BSBommai @BJP4Karnataka @INCKarnataka
— Araga Jnanendra (@JnanendraAraga) March 16, 2023