ಮಂಗಳೂರು: ಬಿ.ಸಿ.ರೋಡ್ ಸಮೀಪದ ಕಲ್ಪನೆ ಬಳಿ ನೊಣಗಳು ಕಚ್ಚಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಕಲ್ಪನೆ ಬಸ್ಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮೂವರಿಗೆ ನೊಣಗಳು ಕಚ್ಚಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿವಾಸಿ ಪೂವಪ್ಪ (61) ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತಿಬ್ಬರು ಗಾಯಾಳು ಮಹೇಶ್ ಮತ್ತು ಗೋಪಾಲ್ ಎಂಬವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಅಪಾಯದಿಂದ ಪಾರಾಗಿದ್ದಾರೆ.