ವಾಮಾಚಾರದಿಂದ ತಪ್ಪದ ಗ್ರಹಚಾರ

ಮಂಗಳೂರು: ಯುವಕನೋರ್ವ ತನ್ನ ಪತ್ನಿಯ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಚ್ಚಿಲಕೋಡಿ ಎಂಬಲ್ಲಿ  ಮಾ.19ರಂದು  ನಡೆದಿದೆ. ಹಲವು  ವರ್ಷಗಳಿಂದ ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯ ಗಾರ್ಡನ್ ಕೆಲಸ ನಿರ್ವಹಿಸುತ್ತಿದ್ದ ವಿಟ್ಲದ ಕನ್ಯಾನ ನಿವಾಸಿ  ಬಾಬು ಶೆಟ್ಟಿಗಾರ್ ಎಂಬವರ ಪುತ್ರ  ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು. 

 

ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಯುವತಿಯೊಂದಿಗೆ ಹರೀಶ್‌ ವಿವಾಹವಾಗಿದ್ದು, ಮಡದಿ 7 ತಿಂಗಳ ಗರ್ಭಿಣಿಯಾಗಿದ್ದಾಳೆ. ಮಾ.12ರಂದು ಹರೀಶ್ ತನ್ನ ತಾಯಿಯ ಅಕ್ಕನ ಮಗ ಕೊಣಾಜೆ ಮುಚ್ಚಿಲಕೋಡಿ ನಿವಾಸಿ ರಮೇಶ್ ಶೆಟ್ಟಿಗಾರ್ ಎಂಬವರಿಗೆ ಕರೆ ಮಾಡಿ ತನ್ನ ಬ್ಯಾಗಿನಲ್ಲಿ ಭಸ್ಮ, ತಗಡು ದೊರೆತಿದ್ದು,ಯಾರೋ ವಾಮಾಚಾರ ಮಾಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಇದಕ್ಕೆ ಸಹೋದರ ರಮೇಶ್ ಮಾ.19ರಂದು ಈ ಕುರಿತು ಮಾತಾಡೋಣ ಎಂದು ಹೇಳಿದ್ದ. ಅದರಂತೆ ರಮೇಶ್ ಮನೆಗೆ ‌ ಪೆಟ್ರೋಲ್ ತುಂಬಿದ ಕ್ಯಾನಿನೊಂದಿಗೆ ಬಂದ ಹರೀಶ್‌ ಮಾತುಕತೆ ಆರಂಭಕ್ಕೆ ಮೊದಲೇ ಅಂಗಳದಲ್ಲಿ ಮೈಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮನೆಮಂದಿ ಗಾಬರಿಗೊಂಡು ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಹರೀಶ್ ಸಾವನ್ನಪ್ಪಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಅರೆಬೆಂದ ಸ್ಥಿತಿಯಲ್ಲಿದ್ದ ಹರೀಶ್ ಖುದ್ದಾಗಿಯೇ ಆಂಬ್ಯುಲೆನ್ಸ್  ಹತ್ತಿದ್ದರು ಎಂದು ತಿಳಿದುಬಂದಿದೆ. 

LEAVE A REPLY

Please enter your comment!
Please enter your name here