ಮಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾರ್ಚ್ 21ರಿಂದ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು, ಮೇಲೆ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯದ ಕೊಡಗು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ತುಮಕೂರು, ಉಡುಪಿ, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.