ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆಂಬ ಆರೋಪದ ಹಿನ್ನಲೆಯಲ್ಲಿ ನಟ ಚೇತನ್ ಅಹಿಂಸಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾ.21ರ ಮಂಗಳವಾರ ಬೆಳಗ್ಗೆ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಬಂಧಿಸಿ ಬೆಂಗಳೂರಿನ 32ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದ್ದು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಮಾ.20ರ ರಾತ್ರಿ ಶೇಷಾದ್ರಿಪುರಂ ಠಾಣೆಯಲ್ಲಿ ಶಿವಕುಮಾರ್ ಎಂಬವರು ನಟ ಚೇತನ್ ವಿರುದ್ಧ ದೂರು ನೀಡಿದ್ದು ಐಪಿಸಿ ಸೆಕ್ಷನ್ 295ಎ 505ಬಿ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
ಚೇತನ್ ಟ್ವೀಟ್ ಪೋಸ್ಟ್ ಇಲ್ಲಿದೆ….