ಮಂಗಳೂರು: ಕಾಂಗ್ರೆಸ್ ಪಕ್ಷದ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾ.22 ಯುಗಾದಿ ದಿನದಂದು ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಮೂಲಕ ಟಿಕೆಟ್ ಆಕಾಂಕ್ಷಿಗಳಿಗೆ ನಾಳೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಬೇವು ಬೆಲ್ಲ ಹಂಚಲಿದ್ದಾರೆ.
ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸಾದ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಡಲಾಗುವುದು ಎಂದು ಹೇಳಲಾಗಿತ್ತು. ಅದರಂತೆ ನಾಳೆ ಯುಗಾದಿ ಹಬ್ಬದಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಸಿದ್ದರಾಮಯ್ಯ ಅವರು ಬಯಸಿದ ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶವಿದೆ. ಕೋಲಾರ, ವರುಣ, ಬಾದಾಮಿ, ಚಾಮುಂಡೇಶ್ವರಿ ಯಾವುದಾದರೂ ಕ್ಷೇತ್ರವನ್ನು ಆಯ್ಕೆ ಮಾಡಲಿ. ಅವರ ಅನುಕೂಲ ನೋಡಿಕೊಂಡು ತೀರ್ಮಾನ ಮಾಡಲಿ. ಎಲ್ಲಿ ತೀರ್ಮಾನ ಮಾಡ್ತಾರೋ ಅಲ್ಲೇ ಅವಕಾಶ ಕೊಡ್ತೀವಿ ಎಂದು ಹೇಳಿದ್ದಾರೆ. ಉರಿ ಗೌಡ – ನಂಜೇ ಗೌಡ ವಿವಾದವನ್ನು ಹುಟ್ಟು ಹಾಕಿದವರ ವಿರುದ್ದ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಸುವುದಾಗಿಯೂ ಅವರು ಹೇಳಿದ್ದಾರೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ