ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಕಾವೂರು ಸಮೀಪದ ಮರಕಡ ನಿವಾಸಿ ಬಸ್ ಚಾಲಕ ದಯಾನಂದ ದಾನಣ್ಣ ನವರ್ (30) ಎಂಬಾತನಿಗೆ ಮಂಗಳೂರು ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಆರೋಪಿ 13 ವರ್ಷದ ಬಾಲಕಿಯನ್ನು ಇನ್ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು 2022 ಜನವರಿ 28 ರಂದು ಪುಲಾಯಿಸಿ ಆಟೋವೊಂದರಲ್ಲಿ ನಗರದ ಹಂಪನಕಟ್ಟೆಗೆ ಕರೆದೊಯ್ದು ಲಾಡ್ಜ್ ನಲ್ಲಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.