







ಮಂಗಳೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಬಗ್ಗೆ ಶಿಫಾರಸ್ಸು ಮಾಡದಂತೆ ಕಂದಾಯ ಸಚಿವ ಆರ್ ಅಶೋಕ್ ರಾಜ್ಯ ಸರಕಾರವನ್ನು ತಡೆದಿದ್ದಾರೆ ಎಂದು ಅಖಿಲ ಕರ್ನಾಟಕ ಡಾ. ರಾಜಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ ಆರೋಪಿಸಿದೆ.



ಸಚಿವ ಆರ್ ಅಶೋಕ್ ಒತ್ತಡದಿಂದ ಮುಖ್ಯ ಮಂತ್ರಿಗಳು ಪುನೀತ್ ಅವರ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿಲ್ಲ ಎಂದು ಒಕ್ಕೂಟದ ಕಾರ್ಯದರ್ಶಿ ಹೊನ್ನಯ್ಯ ಗೌಡ ಆರೋಪಿಸಿದ್ದಾರೆ. ಏಪ್ರಿಲ್ 24 ಡಾ ರಾಜಕುಮಾರ್ ಜನ್ಮ ದಿನದಂದು ಆರ್ ಅಶೋಕ್ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಅವರು ತಿಳಿಸಿದ್ದಾರೆ.














