ಮಾಜಿ ಸಚಿವ ಅಂಜನಾಮೂರ್ತಿ ಇನ್ನಿಲ್ಲ

ಮಂಗಳೂರು: ಮಾಜಿ ಸಚಿವ ಅಂಜನಾಮೂರ್ತಿ (72) ಇಂದು ಮಾರ್ಚ್ 23 ರ ಮುಂಜಾನೆ ಬೆಂಗಳೂರಿನ ಮಲ್ಲೇಶ್ವರಂ ನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿಂದೆ ಕರ್ನಾಟಕ ಸರಕಾರದ ವಸತಿ ಸಚಿವರಾಗಿ, ಉಪ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ನೆಲಮಂಗಲದ ಮನೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

LEAVE A REPLY

Please enter your comment!
Please enter your name here