ಈ ಕಾರ್ಯಕ್ರಮ ಮುಗಿದ ಮೇಲೆ ರಾಜ್ಯದಲ್ಲಿ ಚುನಾವಣೆ ಘೋಷಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ ಮಾ 25 ರಂದು ರಾಜ್ಯಕ್ಕೆ ಮತ್ತೆ ಭೇಟಿ ನೀಡಲಿದ್ದಾರೆ.
ದಾವಣಗೆರೆಯಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೋದಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಮಾತ್ರವಲ್ಲ ಚಿಕ್ಕಬಳ್ಳಾಪುರದಲ್ಲಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದು ಮಾ 26 ರಂದು ವಿಧಾನ ಸೌಧ ಮುಂಭಾಗದಲ್ಲಿ ಸ್ಥಾಪಿಸಲಾದ ಬಸವಣ್ಣ ಮತ್ತು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಶುಕ್ರವಾರ ಸಂಜೆ ಕೊನೆಯ ಸಂಪುಟ ಸಭೆ ನಡೆಯಲಿದ್ದು ಮುಖ್ಯ ಮಂತ್ರಿ ಬೊಮ್ಮಾಯಿ ಪಂಚಮ ಸಾಲಿ ಮೀಸಲಾತಿಗೆ ಸಂಬಂಧಿಸಿ ಮಹತ್ವದ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಇದೆಲ್ಲಾ ಮುಗಿಯುತ್ತಿದ್ದಂತೆ ಚುನಾವಣಾ ಆಯೋಗ ರಾಜ್ಯದಲ್ಲಿ ಚುನಾವಣೆ ಘೋಷಣೆ ಮಾಡಲಿದೆ.

LEAVE A REPLY

Please enter your comment!
Please enter your name here