ಮಾಡಾಲ್‌- ನಿರೀಕ್ಷಣಾ ಜಾಮೀನು ಅರ್ಜಿ ವಜಾ-ಬಂಧನ ಸಾಧ್ಯತೆ

ಮಂಗಳೂರು : ಕೆ ಎಸ್‌ ಬಿ ಎಲ್‌ ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೋಮವಾರ ರಾಜ್ಯ ಹೈಕೋರ್ಟ್‌ ಏಕಸದಸ್ಯ ಪೀಠ ವಜಾಗೊಳಿಸಿದೆ. ಹೈಕೋರ್ಟ್‌ ನಲ್ಲಿ ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದು ವಾದ ವಿವಾದ ಆಲಿಸಿದ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ವಿರೂಪಾಕ್ಷಪ್ಪ ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here