ಮಂಗಳೂರು: ಪಿಎಸ್ ಐ ಅಕ್ರಮ ನೇಮಕಾತಿ ಹಗರಣದಲ್ಲಿ ಭಾಗಿಯಾಗಿ ಬಳಿಕ ಪರಾರಿಯಾಗಿದ್ದ ಆರೋಪಿ ಪಿಎಸ್ ಐ ನವೀನ್ ನನ್ನು ಬಂಧಿಸಲಾಗಿದೆ.
ಬ್ಯಾಡರ ಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಗಿದ್ದ ನವೀನ್ ಕಳೆದ 8 ತಿಂಗಳಿನಿಂದ ತಲೆ ಮರೆಸಿಕೊಂಡಿದ್ದು, ಕೊನೆಗೂ ಸಿಐಡಿ ಅಧಿಕಾರಿಗಳು ಆತನ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಪಿಎಸ್ ಐ ಹರೀಶ್ ಜೊತೆ ಸಂಪರ್ಕ ಹೊಂದಿದ್ದ ನವೀನ್ ಕಳೆದ ಅಕ್ಟೋಬರ್ ತಿಂಗಳಿನ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿ ಕೊಂಡಿದ್ದರು.