ಮಂಗಳೂರು: ಕಾಸರಗೋಡು ನಗರದ ಬಾವಿಯೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಮಾ.27ರಂದು ಮಧ್ಯಾಹ್ನ ಪತ್ತೆಯಾಗಿದೆ.
ಕರಂದಕ್ಕಾಡ್ ಅಶ್ವಿನಿ ನಗರದ ಖಾಸಗಿ ಆಸ್ಪತ್ರೆ ಪರಿಸರದ ಬಾವಿಯಿಂದ ಬರುತ್ತಿದ್ದ ದುರ್ವಾಸನೆ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲನೆ ನಡೆಸಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕಾಸರಗೋಡು ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮಹಜರು ನಡೆಸಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ತನಿಖೆ ಮುಂದುವರಿದಿದೆ.