ಮಂಗಳೂರು: ಅವರನ್ನು ಕೊಲೆಯತ್ನ ಪ್ರಕರಣವೊಂದರಲ್ಲಿ ದೋಷಿ ಎಂದು ಘೋಷಿಸಿದ್ದ ಲಕ್ಷದ್ವೀಪ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಕೇರಳ ಹೈಕೋರ್ಟ್ ಜನವರಿ 25 ರಂದು ವಜಾಗೊಳಿಸಿದ ಹಿನ್ನೆಲೆಯಲ್ಲಿ ಲೋಕಸಭಾ ಸೆಕ್ರಟೇರಿಯಟ್ ಇಂದು ಅಧಿಸೂಚನೆ ಹೊರಡಿಸಿ ಅವರನ್ನು ಅನರ್ಹಗೊಳಿಸಿದ ಕ್ರಮವನ್ನು ವಾಪಸ್ ಪಡೆದು ಅವರ ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದೆ.
ತಮ್ಮನ್ನು ದೋಷಿ ಎಂದು ಘೋಷಿಸಿದ ಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ದೊರೆತಿರುವ ಹೊರತಾಗಿಯೂ ತಮ್ಮನ್ನು ಅನರ್ಹಗೊಳಿಸಿದ ಕ್ರಮವನ್ನು ವಾಪಸ್ ಪಡೆಯಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಎನ್‌ಸಿಪಿ ಸಂಸದರಾಗಿರುವ ಮೊಹಮ್ಮದ್ ಫೈಝಲ್ ಅವರು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿರುವ ಮುನ್ನವೇ ಲೋಕಸಭಾ ಸೆಕ್ರಟೇರಿಯಟ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ಇಂದು ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರ ಪೀಠ ನಡೆಸಲಿದೆ.