ಮಾ.31 ರಿಂದ ಎ.15 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಮಂಗಳೂರು: ರಾಜ್ಯಾದ್ಯಂತ  ನಾಳೆ ಮಾ.31ರಿಂದ  ಏ.15 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ.

3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ರಾಜ್ಯದ 5833 ಸರ್ಕಾರಿ ಶಾಲೆಗಳು, 3605 ಅನುದಾನಿತ ಶಾಲೆಗಳು ಹಾಗೂ 6060 ಅನುದಾನರಹಿತ ಶಾಲೆಗಳು ಸೇರಿ 15,498 ಶಾಲೆಗಳಿಂದ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ವಿದ್ಯಾರ್ಥಿಗಳ ಪೈಕಿ 7,94,611 ಶಾಲಾ ವಿದ್ಯಾರ್ಥಿಗಳು, 20750 ಪುನರಾವರ್ತಿತ ವಿದ್ಯಾರ್ಥಿಗಳು, 18272 ಖಾಸಗಿ ಅಭ್ಯರ್ಥಿಗಳು, 8862 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು, 301 ಮಂದಿ 2010 ಕ್ಕಿಂತ ಹಿಂದಿನ ಸಾಲಿನ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 15 ಮಂದಿ 2010 ಕ್ಕಿಂತ ಹಿಂದಿನ ಸಾಲಿನ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿದ್ದಾರೆ. ಸರ್ಕಾರಿ ಶಾಲೆಗಳ 3,60,862 ವಿದ್ಯಾರ್ಥಿಗಳು, ಅನುದಾನಿತ ಶಾಲೆಗಳ 2,20,831 ಹಾಗೂ ಅನುದಾನರಹಿತ ಶಾಲೆಗಳ 2,61,118 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, 1845 ರೆಗ್ಯುಲರ್ ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು, 1354 ರೆಗ್ಯುಲರ್ ನಾನ್ ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು ಹಾಗೂ 106 ಖಾಸಗಿ ಪರೀಕ್ಷಾ ಕೇಂದ್ರಗಳಾಗಿವೆ.

ದ.ಕ.ಜಿಲ್ಲೆಯ 4 ಖಾಸಗಿ ಸಹಿತ 98 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಜಿಲ್ಲೆಯ 523 ಶಾಲೆಗಳ 29,572 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಇದರಲ್ಲಿ ನೇರವಾಗಿ ಹತ್ತನೇ ತರಗತಿ ಓದಿದ 867 ವಿದ್ಯಾರ್ಥಿಗಳು ಸೇರಿದ್ದಾರೆ. ಈ ಮಕ್ಕಳಿಗೆ 4 ಖಾಸಗಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 

LEAVE A REPLY

Please enter your comment!
Please enter your name here