ಮಂಗಳೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೈವೆಯ ಟೋಲ್ ಪ್ಲಾಜಾ ಬಳಿ ವಾಹನ ಸವಾರ ಹಾಗೂ ಟೋಲ್ ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದೆ.
ರಾಮನಗರದ ಕಣಿಮಿಣಿಕೆ ಟೋಲ್ ಪ್ಲಾಜಾ ಸಿಬ್ಬಂದಿ ವಾಹನ ಸವಾರನ ಮೇಲೆ ಹಲ್ಲೆ ಮಾಡಿದ್ದು, ಈ ವೇಳೆ ಟೋಲ್ ಸಿಬ್ಬಂದಿಗಳು ವಾಹನ ಸವಾರನಿಗೆ ಚೆನ್ನಾಗಿ ಥಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಬೆಂಗಳೂರು ತಣಿಸಂದ್ರ ನಿವಾಸಿ ವಿಶ್ವನಾಥ್ ಎಂದು ಗುರುತಿಸಲಾಗಿದೆ. ಟೋಲ್ ಪ್ಲಾಜಾದಲ್ಲಿ ಕಾರಿನ ಫಾಸ್ಟ್ ಟ್ಯಾಗ್ ರೀಡ್ ಆಗಿರಲಿಲ್ಲ. ಫಾಸ್ಟ್ ಟ್ಯಾಗ್ ರೀಡ್ ಆಗದೇ ಇದ್ದದ್ದನ್ನು ವಾಹನ ಸವಾರ ಪ್ರಶ್ನೆ ಮಾಡಿದ್ದಾರೆ. ಈ ಸಂಧರ್ಭದಲ್ಲಿ ವಾಹನ ಚಾಲಕ ಹಾಗೂ ಟೋಲ್ ಪ್ಲಾಜಾ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ. ಹಲ್ಲೆ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಈ ಸಂಬಂಧ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ