ಮಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿದ್ದರೂ ಏಪ್ರಿಲ್ 11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ವಿಶೇಷ ವಿಕಲಚೇತನರು ಮನೆಯಿಂದಲೇ ಮತದಾನ ಮಾಡಬಹುದಾಗಿದ್ದು, ಮನೆಯಿಂದ ಮತ ಹಾಕುವವರಿಗೆ ಫಾರಂ 12ರಡಿ ಅನುಮತಿ ನೀಡಲಾಗುತ್ತದೆ. ವಿಕಲಚೇತನರ ಮನೆಗೆ ಚುನಾವಣಾ ಸಿಬ್ಬಂದಿ ಮತ್ತು ಪಕ್ಷದ ಪ್ರತಿ ನಿಧಿ ತೆರಳಲಿದ್ದಾರೆ. ವಿಕಲಚೇತನರ ಮತದಾನದ ವೇಳೆ ಗೌಪ್ಯತೆ ಕಾಪಾಡಲಾಗುತ್ತದೆ. ಈ ಬಾರಿ ರಾಜ್ಯ ಮತದಾರರ ಪಟ್ಟಿಗೆ 3,021 ಅನಿವಾಸಿ ಭಾರತೀಯರ ಹೆಸರು ಸೇರ್ಪಡೆಯಾಗಿವೆ ಎಂದು ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದರು.