ಪೋಪ್ ಫ್ರಾನ್ಸಿಸ್ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

ಮಂಗಳೂರು: ಪೋಪ್ ಫ್ರಾನ್ಸಿಸ್ (86) ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು ಅವರನ್ನು ರೋಮ್ ನ ಜಿಮೆಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ವಾಸಕೋಶದ ಸೋಂಕಿನಿಂದ ಬಳಳುತ್ತಿರುವ ಪೋಪ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವ್ಯಾಟಿಕನ್ ಅಧಿಕೃತವಾಗಿ ಪ್ರಕಟಿಸಿದೆ. ವ್ಯಾಟಿಕನ್ ವಕ್ತಾರ ಮ್ಯಾಟಿಯೋ ಬ್ರೂನಿ, ಪೋಪ್ ವಯೋ ಸಹಜ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಕೀಳು ನೋವಿನಿಂದ ಗಾಲಿ ಕುರ್ಚಿಯಲ್ಲಿ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು ಎಂದು ಹೇಳಿದ್ದಾರೆ. 2021 ಜುಲೈ ನಲ್ಲಿ ಪೋಪ್ ಅವರ ದೊಡ್ಡ ಕರುಳಿನ 13 ಇಂಚುಗಳಷ್ಟು ಭಾಗವನ್ನು ತೆಗೆಯಲಾಗಿತ್ತು. ಪೋಪ್ ಅವರ ಹದಿ ಹರೆಯದಲ್ಲೂ ಶ್ವಾಸಕೋಶದ ಒಂದು ಭಾಗವನ್ನು ತೆಗೆಯಲಾಗಿತ್ತು.

LEAVE A REPLY

Please enter your comment!
Please enter your name here