ಮಂಗಳೂರು: ಬಹುಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 500 ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ಉತ್ತರಪ್ರದೇಶದ ಕಾನ್ಪುರದ ಬಾಸ್ಮಂಡಿ ಪ್ರದೇಶದಲ್ಲಿ ನಡೆದಿದೆ.
ಬೆಂಕಿ ಅವಘಡಕ್ಕೂ ಮೊದಲು ಈ ಪ್ರದೇಶದಲ್ಲಿ ಧೂಳಿನಿಂದ ಕೂಡಿದ ಬಿರುಗಾಳಿ ಬೀಸಿದ್ದು ಈ ಸಮಯದಲ್ಲಾದ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಒಂದು ಅಂಗಡಿಗೆ ಹತ್ತಿಕೊಂಡ ಬೆಂಕಿ ಎಲ್ಲಾ ಕಡೆ ವ್ಯಾಪಿಸಿದ್ದು ನೂರಾರು ಕೋಟಿ ಮೌಲ್ಯದ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಹೋಗಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ