ಮಂಗಳೂರು: ಉತ್ತರಪ್ರದೇಶದ ಬುಲಂದ್ ಶಹರ್ ಕೊಟ್ವಾಲಿ ನಗರ್ ಪ್ರದೇಶದ ನಯಾಗಾಂವ್ ನ ಹೊಲದ ಮಧ್ಯದಲ್ಲಿರುವ ಮನೆಯೊಂದರಲ್ಲಿ ಶುಕ್ರವಾರ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರನ್ನು ಅಭಿಷೇಕ್ (20), ರಯೀಸ್ (40), ಅಹದ್ (05) ಹಾಗೂ ವಿನೋದ್ ಎಂದು ಗುರುತಿಸಲಾಗಿದೆ. ಸ್ಫೋಟ ಸಂಭವಿಸಿದ ಮನೆಯಲ್ಲಿ ಇವರು ಬಾಡಿಗೆಗೆ ಇದ್ದರೆಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳದಲ್ಲಿ ಕೆಲವು ಸಿಲಿಂಡರ್ ಹಾಗೂ ಡ್ರಮ್ ಗಳು ಪತ್ತೆಯಾಗಿವೆ. ಪುರಾವೆಗಳನ್ನು ಸಂಗ್ರಹಿಸಲು ವಿಧಿ ವಿಜ್ಞಾನ ತಂಡಕ್ಕೆ ಕರೆ ನೀಡಲಾಗಿದೆ. ಸ್ಫೋಟದ ಹಿಂದಿನ ನಿಖರ ಕಾರಣಗಳನ್ನು ತಿಳಿಯಲು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಚಂದ್ರ ಪ್ರಕಾಶ್ ಸಿಂಗ್ ಹೇಳಿದ್ದಾರೆ.