ಮಂಗಳೂರು: ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಶನಿವಾರದಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರತಿ ಯೂನಿಟ್‌ಗೆ ರೂ.91.50 ಕಡಿತಗೊಳಿಸಿವೆ.ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ 2,028 ರೂ. ಆಗಲಿದೆ. ಆದರೆ, ದೇಶೀಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಈ ವರ್ಷ ಮಾರ್ಚ್ 1 ರಂದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 350.50 ರೂ. ಹಾಗೂ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 50 ರೂ. ಹೆಚ್ಚಿಸಿದ್ದವು.ಇದಕ್ಕೂ ಮುನ್ನ ಜನವರಿ 1 ರಂದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ಪ್ರತಿ ಯೂನಿಟ್‌ಗೆ 25 ರೂ. ಹೆಚ್ಚಿಸಲಾಗಿತ್ತು.