ಮಂಗಳೂರು: ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು ಶಾಸಕನ ಪುತ್ರನೋರ್ವನ ಕಾರನ್ನು ತಪಾಸಣೆ ಮಾಡದೆ ಬಿಟ್ಟ ಅಧಿಕಾರಿಗೆ ತಹಶೀಲ್ದಾರ್ ತರಾಟೆಗೆ ತೆಗೆದುಕೊಂಡಿರುವ ಘಟನೆ ಬೆಳಗಾವಿಯ ಕಾಗವಾಡ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಕಾಗವಾಡದ ಹಾಲಿ ಶಾಸಕ ಮಾಜಿ ಜವಳಿ ಸಚಿವ ಶ್ರೀಮಂತ ಪಾಟೀಲ್ ಅವರ ಪುತ್ರನ ಕಾರನ್ನು ತಪಾಸಣೆ ಮಾಡದೆ ಬಿಟ್ಟಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಪಾಸಣೆ ಮಾಡದೆ ಬಿಟ್ಟಿರುವ ವಿಡಿಯೋವನ್ನು ಸ್ಥಳೀಯರು ರೆಕಾರ್ಡ್ ಮಾಡಿ ಹರಿಯ ಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಜನ ಸಾಮಾನ್ಯರಿಗೊಂದು ನ್ಯಾಯ, ಜನ ಪ್ರತಿನಿಧಿಗಳ ಮಕ್ಕಳಿಗೊಂದು ನ್ಯಾಯಾನಾ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು. ವಾಹನ ಚೆಕ್ ಮಾಡದೆ ಬಿಟ್ಟ ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ಬಂದ ತಹಶೀಲ್ದಾರ್ ಕರ್ತವ್ಯದಲ್ಲಿದ್ದ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದು ಇನ್ನೊಮ್ಮೆ ಇದೇ ರೀತಿ ಆದರೆ ಕ್ರಮ ಜರಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ