ಕುಸಿದ ವೇದಿಕೆ – ಇಬ್ಬರು ಕಾಂಗ್ರೆಸ್‌ ಶಾಸಕರಿಗೆ ಗಾಯ

ಮಂಗಳೂರು: ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ಚತ್ತಿಸ್ ಗಡದ ಬಿಲಾ‌ಸ್ಪುರ್ ಜಿಲ್ಲೆಯಲ್ಲಿ ಎ.2 ರಂದು ನಡೆದ ಪಂಜಿನ ರ್‍ಯಾಲಿ ಆಯೋಜಿಸಲಾಗಿತ್ತು.

ಈ ವೇಳೆ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ವೇದಿಕೆ ಕುಸಿದು ಬಿದ್ದ ಪರಿಣಾಮ ಶಾಸಕರಾದ ಶೈಲೇಶ್ ಪಾಂಡೆ ಮತ್ತು ರಶ್ಮಿ ಸಿಂಗ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಕಿಕ್ಕಿರಿದು ತುಂಬಿದ್ದ ವೇದಿಕೆ ಏಕಾಏಕಿ ಕುಸಿದು ಬೀಳುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

LEAVE A REPLY

Please enter your comment!
Please enter your name here