ಮಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಭ್ಯರ್ಥಿಗಳ ಪಟ್ಟಿ ನಕಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಟೀಲ್ ಇದು ಕಾಂಗ್ರೆಸ್ ನ ಸುಳ್ಳಿನ ಫ್ಯಾಕ್ಟರಿಯಿಂದ ಬಂದ ಮತ್ತೊಂದು ಸುಳ್ಳು. ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಇದು ನಕಲಿ ಪಟ್ಟಿ ಎಂದು ಸ್ಪಷ್ಟಪಡಿಸಿದ್ದಾರೆ. ಗುಜರಾತ್ ಮಾದರಿಯನ್ನು ಪಾಲಿಸಿ, ಬಿಜೆಪಿ ಕೇಂದ್ರೀಯ ಸಮಿತಿ ಕರ್ನಾಟಕ ಚುನಾವಣೆಗೆ ನೂರು ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೆಸರಿನಲ್ಲಿ ಬಿಡುಗಡೆ ಮಾಡಿರುವ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಆ ಪಟ್ಟಿ ಹೀಗಿದೆ…
ಟ್ವೀಟ್…
ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ.
ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ. pic.twitter.com/JJo2sDIL16— Nalinkumar Kateel (@nalinkateel) April 4, 2023