ಮಂಗಳೂರು: ಕರ್ನಾಟಕ ಗಡಿಯೊಳಗಿನ 865 ಹಳ್ಳಿಗಳಿಗೆ ಅನ್ವಯವಾಗುವಂತೆ ಮಹಾತ್ಮ ಜ್ಯೋತಿರಾವ್ ಪುಲೆ ಜನಾರೋಗ್ಯ ಯೋಜನೆ ಜಾರಿ ಮಾಡಿ ಮಹಾರಾಷ್ಟ್ರ ಸರ್ಕಾರ ಕಳೆದ ಏ.3ರಂದು ಆದೇಶ ಹೊರಡಿಸಿದೆ.
ಕರ್ನಾಟಕ ಸರಕಾರದ ಆಕ್ಷೇಪ, ಕೆಪಿಸಿಸಿ ಆಕ್ರೋಶ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೂಚನೆಯನ್ನು ಲೆಕ್ಕಿಸದೆ ಎಲ್ಲವನ್ನು ಗಾಳಿಗೆ ತೂರಿ ಮಹಾರಾಷ್ಟ್ರ ಸರಕಾರ ನಿರ್ಣಯ ಕೈಗೊಂಡಿದೆ. ಮಹಾರಾಷ್ಟ್ರದ ಈ ನಡೆಯನ್ನು ಕಟುವಾಗಿ ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡಿಗರ ವಿರೋಧದ ಹೊರತಾಗಿಯೂ ರಾಜ್ಯದ ಗಡಿಯೊಳಗಿನ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರಕಾರದ ಕ್ರಮ ಉದ್ದಟತನದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ, ಆದೇಶ ವಾಪಸ್ ಪಡೆಯದಿದ್ದರೆ ಪರಿಣಾಮ ನೆಟ್ಟಗಾಗದು ಎಂದು ಟ್ವೀಟ್ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಇದನ್ನು ಖಂಡಿಸಿದ್ದು, ಇದು ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.
ಟ್ವೀಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ರಾಜ್ಯದ ಗಡಿಯೊಳಗೆ ಆರೋಗ್ಯ ವಿಮೆ ಜಾರಿಗೆ ಮಹಾರಾಷ್ಟ್ರ ಸರ್ಕಾರ ಯತ್ನಿಸಿದಾಗಲೇ ನಾವು ವಿರೋಧಿಸಿದ್ದೆವು. ಅಲ್ಲಿಯ ವರೆಗೆ ತೆಪ್ಪಗಿದ್ದ ರಾಜ್ಯದ ಮುಖ್ಯಮಂತ್ರಿ @BSBommai ನಮ್ಮ ಒತ್ತಡಕ್ಕೆ ಮಣಿದು ವೀರಾವೇಶದ ಮಾತುಗಳನ್ನಾಡಿದ್ದರು.
ಆ ಆವೇಶ, ಬದ್ಧತೆಯನ್ನು ತೋರಿಸಬೇಕಾದ ಕಾಲ ಈಗ ಬಂದಿದೆ. 3/5#ಗಡಿವಿವಾದ— Siddaramaiah (@siddaramaiah) April 5, 2023