ಮಂಗಳೂರು: ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಎಎಪಿ ಪಕ್ಷ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಅಮೋಘ ಸಾಧನೆ ತೋರಿದ್ದ ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷದ ಮಾನ್ಯತೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಆದರೆ, ಇಲ್ಲಿಯವರೆಗೂ ಮಾನ್ಯತೆ ನೀಡದಿರುವುದನ್ನು ಪ್ರಶ್ನಿಸಿ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ದರ್ಶನ್ ಜೈನ್ ಕರ್ನಾಟಕ ಹೈ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರಬೇಕು, ಹಾಗೂ ನಾಲ್ಕು ರಾಜ್ಯಗಳಲ್ಲಿ ಕನಿಷ್ಟ 6% ಮತ ಪಡೆದಿರಬೇಕು.
ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷವು, ರಾಷ್ಟ್ರೀಯ ಪಕ್ಷವಾಗುವ ಎಲ್ಲಾಅರ್ಹತೆಯನ್ನು ಹೊಂದಿದ್ದರೂ ರಾಷ್ಟ್ರೀಯ ಸ್ಥಾನಮಾನ ಪಡೆಯಲು ವಿಳಂಬವಾಗುತ್ತಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಆಮ್ ಆದ್ಮಿ ಪಕ್ಷದ ಅರ್ಜಿಯನ್ನು ಪುರಸ್ಕರಿಸಿದ ಕರ್ನಾಟಕ ಹೈಕೋರ್ಟ್ ಎಪ್ರಿಲ್ 13 ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್ ಆದ್ಮಿ ಪಕ್ಷಕ್ಕೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ