ಮಂಗಳೂರು: ಕೆಪಿಸಿಸಿ ಅಧ್ಯಕ್ಷರೂ, ಮಾಜಿ ಸಂಸದರೂ ಆಗಿದ್ದ ದಿವಂಗತ ಧ್ರುವ ನಾರಾಯಣ್ ಪತ್ನಿ ವೀಣಾ ಮೃತರಾಗಿದ್ದಾರೆ. ಅವರಿಗೆ 54 ವರ್ಷ ಪ್ರಾಯವಾಗಿತ್ತು.
ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ವೀಣಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಪತಿ ನಿಧನರಾಗಿ ಕೇವಲ 28 ದಿನಕ್ಕೆ ಪತ್ನಿ ವಿಧಿವಶರಾಗಿದ್ದಾರೆ. ಮೈಸೂರಿನ ವಿಜಯನಗರದ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ವೇಳೆಗೆ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.