ಮಂಗಳೂರು: ಕೊಡವರಿಗೆ ಪ್ರತ್ಯೇಕ ಸ್ಥಾನಮಾನಕ್ಕಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸರಕಾರಕ್ಕೆ ಸಲ್ಲಿಸಿರುವ ಮನವಿಯನ್ನು ಪರಿಗಣಿಸುವಂತೆ ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ರಾಜ್ಯ ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ರಾಜ್ಯಸಭಾ ಸದಸ್ಯರಾಗಿರುವ ಅರ್ಜಿದಾರ ಸುಬ್ರಹ್ಮಣ್ಯಂ ಸ್ವಾಮಿ ಖುದ್ದಾಗಿ ಹೈಕೋರ್ಟಿಗೆ ಹಾಜರಾಗಿ ನ್ಯಾಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸ್ವೀಕರಿಸಿದ ನ್ಯಾಯಪೀಠ ಏ.17ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಪ್ರಕರಣದಲ್ಲಿ ರಾಜ್ಯ ಕಾನೂನು ಇಲಾಖೆ ಕಾರ್ಯದರ್ಶಿ, ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿ, ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್ ಯು ನಾಚಪ್ಪ ಅವರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.