ಕೀಳು ಮಟ್ಟದ ಮೋಜಿನ ಪರಮಾವಧಿ……

ಮಂಗಳೂರು : ರಾಷ್ಟ್ರಗೀತೆಗೆ ಅವಮಾನ ಮಾಡಿ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ ಇಬ್ಬರು ಯುವತಿಯರ ವಿರುದ್ಧ ಪಶ್ಚಿಮ ಬಂಗಾಳದ ಪೊಲೀಸರು ದೂರು ದಾಖಲಿಸಿದ್ದಾರೆ.

ವಿಡಿಯೋದಲ್ಲಿ ಯುವತಿಯರು ಉದ್ದೇಶಪೂರ್ವಕವಾಗಿ ಸಿಗರೇಟ್ ಕೈಯಲ್ಲಿ ಹಿಡಿದು ತಪ್ಪು ಸಾಹಿತ್ಯ ಬಳಸಿ ರಾಷ್ಟ್ರಗೀತೆ ಹಾಡುವುದನ್ನು ನೋಡಬಹುದಾಗಿದೆ. ವೀಡಿಯೊ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ತಕ್ಷಣ ಫೇಸ್ಬುಕ್ ಖಾತೆಯಿಂದ ವಿಡಿಯೋ ಡಿಲೀಟ್ ಮಾಡಲಾಗಿದ್ದು ಮೋಜಿಗಾಗಿ ವಿಡಿಯೋ ಮಾಡಿರುವುದಾಗಿ ಯುವತಿಯರು ಹೇಳಿದ್ದಾರೆ. ಈ ಸಂಬಂಧ ವಕೀಲರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಕೀಳು ಮಟ್ಟದ ಮೋಜಿಗೆ ಸರಿಯಾದ ಶಿಕ್ಷೆ ಆಗಬೇಕೆಂದು ನೆಟ್ಟಿಗರು ಅಗ್ರಹಿಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

 

LEAVE A REPLY

Please enter your comment!
Please enter your name here