ಇಂದು ತಡ ರಾತ್ರಿ ಅಥವಾ ನಾಳೆ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ

ಮಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಗ್ರಹ ಸಚಿವರು ಪಕ್ಷದ ರಾಜ್ಯ ನಾಯಕರೊಂದಿಗೆ ಶನಿವಾರ ಇಡೀ ದಿನ ಸಮಾಲೋಚನೆ ನಡೆಸಿದ್ದಾರೆ.

ಆದರೂ ಪಕ್ಷದ ಟಿಕೆಟ್ ಹಂಚಿಕೆಯ ಕಗ್ಗಂಟು ಬಗೆ ಹರಿದಿಲ್ಲ. ರಾಜ್ಯ ಸಮಿತಿಯು ಆಕಾಂಕ್ಷಿ ಅಭ್ಯರ್ಥಿಗಳ ಎರಡು ಮೂರು ಹೆಸರುಗಳನ್ನು ಶಿಫಾರಸು ಮಾಡಿದೆ. ಪ್ರತಿ ಕ್ಷೇತ್ರಕ್ಕೆ ಒಬ್ಬ ಆಕಾಂಕ್ಷಿಯ ಹೆಸರು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಶನಿವಾರ ನಡೆಸಲಾಗಿದೆ. ಇಂದು ಭಾನುವಾರ ಕೇಂದ್ರ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು ಪಟ್ಟಿಗೆ ಅಂತಿಮ ರೂಪ ನೀಡಲಾಗುವುದು. ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಭಾನುವಾರ ತಡರಾತ್ರಿ ಅಥವಾ ಸೋಮವಾರ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ನಡುವೆ ದೆಹಲಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೋಮವಾರ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here