ಮಂಗಳೂರು :ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಸಾಗಾಟ ಮಾಡುತ್ತಿದ್ದ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕಾಸರಗೋಡು ಚೆರ್ಕಳದ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಅಕ್ರಮವಾಗಿ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಎಸಿಪಿ ಪಿ ಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರ ತಂಡ ಆರೋಪಿ ಯಿಂದ 150 ಗ್ರಾಂ ಎಂಡಿಎಂಎ, ಕಾರು ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿದೆ. ಮಾದಕ ವಸ್ತುವಿನ ಮೌಲ್ಯ 17. 61 ಲಕ್ಷ ಎಂದು ಅಂದಾಜಿಸಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ವಿಶಾಖಪಟ್ಟಣ ಕಾಸರಗೋಡು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದ ಪ್ರಕರಣಗಳು ಬಾಕಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.