ಚಾರ್ಮಾಡಿ 2 ನೇ ತಿರುವಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು – ಪಂಚಾಯತ್ ಅಧ್ಯಕ್ಷೆ ಸಹಿತ ಐವರಿಗೆ ಗಂಭೀರ ಗಾಯ

ಮಂಗಳೂರು : ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ರವಿವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾದ ಸಂಬಂಧಿಕರ ಮನೆಗೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಪುಷ್ಪಾವತಿ ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ ಹಾಗೂ ಸಂಬಂಧಿ ಮಹಿಳೆ ಸರೋಜಿನಿ ಶೆಟ್ಟಿ ಸಹಿತ ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪ್ರಪಾತಕ್ಕೆ ಬಿದ್ದವರನ್ನು ಸ್ಥಳೀಯರ ಸಹಕಾರದಿಂದ ಮೇಲಕ್ಕೆ ಎತ್ತಲಾಗಿದೆ. ಗಾಯಾಳುಗಳ ಸ್ಥಿತಿಗತಿ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಾಗಿದೆ.

 

Update : ಗಾಯಾಳುಗಳಲ್ಲಿ ಒಬ್ಬರಾದ ಸರೋಜಿನಿ ಶೆಟ್ಟಿ ಅವರಿಗೆ ಉಜಿರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮದ್ಯೆ ಮೃತ ಪಟ್ಟಿರುತ್ತಾರೆ.

LEAVE A REPLY

Please enter your comment!
Please enter your name here